ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರದಿಂದ ಮಳೆ ಆಗಲಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕ್.. ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!
ಕಲಬುರಗಿ, ಗದಗ, ಯಾದಗಿರಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಬೆಂಗಳೂರು ನಗರ ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಸ್ವಲ್ಪ ಮಟ್ಟಿಗೆ ಕಾಣಿಸಿಕೊಂಡಿದೆ
ಮುಂಗಾರು ಮಳೆ ಜೂನ್ 2 ರಂದು ಆಗಮಿಸಿದ್ದರೂ ಹೆಚ್ಚಿನ ಪ್ರಭಾವ ಬೀರಿಲ್ಲ. ಇದರಿಂದ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಅದಾಗ್ಯೂ, ಮೇ ಹಾಗೂ ಜೂನ್ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಭಾರೀ ಹೆಚ್ಚಾಗಿತ್ತು. ಆದರೆ, ಮುಂಗಾರು ಮಳೆ ಆಗಮನದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 2ನೇ ವಾರದಿಂದಲೇ ಮಳೆ ಪ್ರಮಾಣ ಕಡಿಮೆಯಾಗುತ್ತಾ ಸಾಗಿದೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಮುಂದುವರೆದಿದೆ. ಒಣಹವೆಗಳು ಕಾಣಿಸಿಕೊಳ್ಳುತ್ತಿದ್ದು ಮುಂಗಾರು ಮಳೆಯ ಬಗ್ಗೆ ಆತಂಕ ಪಡುವಂತೆ ಮಾಡಿದೆ. ಈ ಮಧ್ಯೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಜೂನ್ 3ನೇ ವಾರದಲ್ಲಿ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.