ಬೆಂಗಳೂರು:- ಬಕ್ರೀದ್ ಹಬ್ಬದ ಹಿನ್ನೆಲೆ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಐಸ್ಕ್ರೀಂನಲ್ಲಿ ಮಾನವನ ಬೆರಳು ಪತ್ತೆ ಕೇಸ್.. ಕಂಪನಿಯ ಪರವಾನಗಿ ರದ್ದು ಮಾಡಿದ FSSAI..!
ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯಲಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಪೊಲೀಸ್ ಭದ್ರತೆ ಕೈಗೊಂಡಿದ್ದು ಚಾಮರಾಜಪೇಟೆ ಸುತ್ತಮುತ್ತ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.
ಈಗಾಗಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಬಕ್ರೀದ್ ಹಿನ್ನೆಲೆ ಕೆಲ ಕಡೆ ರಸ್ತೆ ಮಾರ್ಗ ಬದಲಿ, ನಿರ್ಬಂಧಗಳನ್ನು ವಿಧಿಸಿದ್ದಾರೆ ಮತ್ತು ಸಂಚಾರ ಸಲಹೆಯನ್ನು ನೀಡಿದ್ದಾರೆ. ಈದ್ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆ ಸಂಚಾರ ನಿರ್ಬಂಧಗಳನ್ನು ವಿಧಿಸಲಾಗಿದೆ. ಸದ್ಯ ಮುಸ್ಲಿಮರು ನಮಾಜ್ಗಾಗಿ ಈದ್ಗಾಗಳ ಬಳಿ ಸೇರುತ್ತಿದ್ದು ಕೆಲವೆಡೆ ಸಂಚಾರ ವ್ಯತ್ಯಯ ಕಂಡು ಬಂದಿದೆ
ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿ ಮತ್ತು ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಬಕ್ರೀದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಮುಸ್ಲಿಮರು ಸೇರಿರುವುದರಿಂದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.