ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ಹೊರ ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ.
Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!
ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ಎಂದರು.