ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!
ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ.