ಕೋಲಾರ: ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೋಲಾರ ನಗರದ ಡೂಂ ಲೈಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎತ್ತಿನ ಗಾಡಿ ಹಾಗೂ ಸೈಕಲ್ ಚಾಲನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದ್ದು,
ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಹಣ ಒದಗಿಸಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂಬ ಆರೋಪ ಹೊರಿಸಿ ಕೋಲಾರ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕರು, ಬಿಜೆಪಿ ಕಾರ್ಯಕರ್ತರು ಮತ್ತಿತರರು ಭಾಗಿಯಾಗಿದ್ದರು.