ಬೆಂಗಳೂರು: ಪೆಟ್ರೋಲ್ ಬೆಲೆ ಲೀಟರ್ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ತಮ್ಮ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು. ಜನವಿರೋಧಿ ಸರ್ಕಾರ ಮತ್ತು ಜನವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ.
Crow Astrology: ಕಾಗೆ ಬಂದು ಮನೆ ಮುಂದೆ ಈ ರೀತಿ ಮಾಡಿದರೆ ಏನ್ ಅರ್ಥ ಗೊತ್ತಾ..?
ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದ ಅವರು, ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಇದ್ದ ಜನಪರ ಕಾಳಜಿ ಮುಖ್ಯಮಂತ್ರಿಗಳಾದ ಬಳಿಕ ಎಲ್ಲಿ ಕಳೆದುಹೋಗಿದೆ ಎಂದು ಪ್ರಶ್ನಿಸಿದರು.