ಬೆಂಗಳೂರು:- ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅತಿ ಬೇಗ ಕರಿಬೇವು ಒಣಗುತ್ತಿದೆಯೇ?: ಹಾಗಿದ್ರೆ ಹೀಗೆ ಮಾಡಿ ತಾಜಾತನ ಗ್ಯಾರಂಟಿ!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.