ಚಿತ್ರದುರ್ಗ: ರೇಣುಕಾ ಸ್ವಾಮಿ ಹತ್ಯೆಯನ್ನು ನಾಗರೀಕ ಸಮಾಜತಲೆ ತಗ್ಗಿಸುವಂತದ್ದು, ಅಮಾನವೀಯವಾದದ್ದು, ನಾಗರೀಕ ಸಮಾಜದ ಯಾರು ಬೆಂಬಲಿಸಲು ಸಾಧ್ಯವಿಲ್ಲ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಧ್ಯಕ್ಷರು, ಮೃತನ ಪೋಷಕರು ಹಾಗೂ ಪತ್ನಿಗೆ ಸಾಂತ್ವನ ಹೇಳಿ ಪಕ್ಷದ ವತಿಯಿಂದ ಎರಡು ಲಕ್ಷ ಪರಿಹಾರ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ, ಅವರು ದೇಶದಲ್ಲಿ ಇವತ್ತು ಈ ವಿಚಾರ ಬಹಳ ಜೋರಾಗಿ ಚರ್ಚೆಯಾಗುತ್ತಿದೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಯಾರ ಒತ್ತಾಯಕ್ಕೆ ಮಣಿಯದೆ ಸೂಕ್ತ ಕಾನೂನು ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ರೇಣುಕಾಸ್ವಾಮಿ ಕೊಲೆ ಅಮಾನವೀಯ ಕೃತ್ಯವಾಗಿದೆ. ನಾಗರೀಕ ಸಮಾಜದಲ್ಲಿ ಯಾರು ಕೂಡ ಇದನ್ನು ಬೆಂಬಲಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಕೂಡ ಈ ಘಟನೆಯನ್ನು ಖಂಡಿಸಬೇಕು ಎಂದರು.