ತುಮಕೂರು:- ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ, ತಿಪಟೂರು ನಗರದ ರೈಲ್ವೇ ನಿಲ್ದಾಣದಲ್ಲಿ ಜರುಗಿದೆ.
ವರ್ಷಿಣಿ(19) ಮೃತ ವಿದ್ಯಾರ್ಥಿನಿ ಎನ್ನಲಾಗಿದೆ. ವರ್ಷಿಣಿ ತಿಪಟೂರು ಪಟ್ಟಣದ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದರು. ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವರ ಪುತ್ರಿ ವರ್ಷಿಣಿ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..ಸ್ಥಳಕ್ಕೆ ಅರಸೀಕೆರೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ