ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್ಪಿಪಿ ಅವರನ್ನು ಬದಲಾಯಿಸಲು ನನ್ನ ಮೇಲೆ ಯಾವುದೇ ಸಚಿವ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
Recruitment: ಬ್ಯಾಂಕ್ ಉದ್ಯೋಗ ಅರಸುತ್ತಿರುವವರಿಗೆ ಖುಷಿ ಸುದ್ದಿ: 5650 ಹುದ್ದೆಗಳು ಖಾಲಿ – ಇಂದೇ ಅರ್ಜಿ ಸಲ್ಲಿಸಿ
ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು. ಕಾನೂನು ಏನು ಹೇಳುತ್ತದೋ ಅದನ್ನೇ ನಾವು ಮಾಡುತ್ತೇವೆ ಎಂದರು. ಪೊಲೀಸರಿಗೆ ಈ ಪ್ರಕರಣದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಇಲ್ಲ ಎಂದು ಹೇಳಿದರು.