ಹಾಸನ : ಹಾಸನದಲ್ಲಿ ಹಾಡಹಗಲೇ ನಡೆದ ಶೂಟೌಟ್ಗೆ ಇಬ್ಬರು ಯುವಕರು ಬಲಿಯಾಗಿದ್ದಾರೆ. ಹೊಯ್ಸಳ ನಗರದಲ್ಲಿ ಘಟನೆ ನಡೆದಿದ್ದು ಗುಂಡು ಹಾರಿಸಿ ಇಬ್ಬರು ಸಾವನಪ್ಪಿದ್ದಾರೆ. ಮಧ್ಯಾಹ್ನ12:30ರ ವೇಳೆಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಎಸ್ಪಿ ಮೊಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದೆ.
Black Pepper Tea: ಕಾಳು ಮೆಣಸಿನ ಚಹಾ ಕುಡಿದಿದ್ದೀರಾ..? ಇದರ ಸೇವನೆಯಿಂದ ಸಿಗಲಿದೆ ಹಲವು ಪ್ರಯೊಜನಗಳು
ಹಾಸನದ ಶರಫತ್ ಅಲಿ, ಬೆಂಗಳೂರಿನ ಆಶಿಫ್ ಮೃತರಾಗಿದ್ದಾರೆ. ಸ್ಥಳಕ್ಕೆ ಶರಫತ್ ಅಲಿ ಪತ್ನಿ ಆಗಮಿಸಿದ್ದಾರೆ. ನಿವೇಶನ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆಯುತಿತ್ತು. ಈ ವಿಚಾರದ ಬಗ್ಗೆ ಇಂದು ಮಾತುಕತೆ ನಡೆಸಲು ಬಂದಾಗ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಹತ್ಯೆಯಲ್ಲಿ ಅಂತ್ಯವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.