ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು. ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವುದರೊಂದಿಗೆ ಕನ್ನಡದಲ್ಲಿಯೇ ಮಾತನಾಡಬೇಕು.
Jamun Fruit: ನೇರಳೆ ಹಣ್ಣು ತಿಂದ ನಂತರ ತಪ್ಪಿಯೂ ಈ ವಸ್ತುಗಳನ್ನು ಸೇವಿಸಬೇಡಿ..!
ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರು ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರು ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವು ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದರು.