ಆಸ್ಟ್ರೇಲಿಯಾ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದಿದೆ. ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ಟಿ20 ವಿಶ್ವಕಪ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸತತ ಗೆಲುವು ದಾಖಲಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. 2022 ರಿಂದ ಶುರುವಾದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಈ ಬಾರಿ ಕೂಡ ಮುಂದುವರೆದಿದೆ. ಈ ಮೂಲಕ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ. ಭಾರತ ತಂಡವು 2012-2014 ರ ಟಿ20 ವಿಶ್ವಕಪ್ನಲ್ಲಿ ಸತತ 7 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಎರಡು ವಿಶ್ವಕಪ್ನಲ್ಲಿ ಸತತ ಏಳು ಗೆಲುವು ದಾಖಲಿಸಿ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿತ್ತು
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ