ಬೆಂಗಳೂರು:- ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಲಿದೆ. ಆರೋಪಿಗಳಾದ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.
Power Cut: ಬೆಂಗಳೂರಿನ ಈ ಎಲ್ಲ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ… ನಿಮ್ಮ ಏರಿಯಾ ಯಾವುದು!?
ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ ರನ್ನು ಇಂದು ಹಾಜಪರುಪಡಿಸಲಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ ಪಡದಿರುವ ಕಾರಣ ಮತ್ತೊಮ್ಮೆ ಆರೋಪಿಗಳನ್ನು ಪೊಲೀಸರು ಸುಪರ್ದಿಗೆ ಪಡೆಯುವ ಸಾಧ್ಯತೆಗಳು ಕಡಿಮೆಯಿದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಳಗಾದರೆ ದರ್ಶನ್ ಮತ್ತು ಅವರ ಗ್ಯಾಂಗ್ ಅಂತಿಮವಾಗಿ ಜೈಲು ಸೇರಲಿದೆ.
ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಪ್ರಿಯತಮೆ ಪವಿತ್ರಾಗೌಡ ಸೇರಿದಂತೆ 13 ಮಂದಿ ಆರೋಪಿಗಳು ಸೆರೆಮನೆ ವಾಸ ಶುರುವಾಗಿದೆ. ಹೀಗಾಗಿ ಬಾಕಿ ಉಳಿದಿರುವ ದರ್ಶನ್ ಸೇರಿ ನಾಲ್ವರು ಕೂಡ ಶನಿವಾರ ಸಂಜೆ ವೇಳೆಗೆ ಪೊಲೀಸ್ ಠಾಣೆಯ ಲಾಕಪ್ ನಿಂದ ಸೆಂಟ್ರಲ್ ಜೈಲ್’ನ ಕತ್ತಲ ಕೋಣೆಗೆ ಸ್ಥಳಾಂತರವಾಗಲಿದ್ದಾರೆ ಎಂದು ತಿಳಿದುಬಂದಿದೆ.