ಬೆಂಗಳೂರು:- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಡೆಂಗ್ಯೂ ಆತಂಕ: ಪೋಷಕರೇ ಮಕ್ಕಳ ಮೇಲಿರಲಿ ಹೆಚ್ಚಿನ ಗಮನ… ನಿಮ್ಮ ಮಗುವನ್ನು ಹೀಗೆ ರಕ್ಷಿಸಿಕೊಳ್ಳಿ!
ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ,ಕಾರ್ಯಕರ್ತರ ಪರಿಶ್ರಮದಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು. ಟಿಕೆಟ್ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ 3-4 ಸೀಟು ನಾವು ಕಳೆದುಕೊಂಡೆವು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು ಎಂ ದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ. ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ ಎಂದು ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ವಿರುದ್ಧದ ಆಕ್ರೋಶವನ್ನು ಜನ ಚುನಾವಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಆಮಿಷ, ಹಣಬಲದ ಹೊರತಾಗಿಯೂ 19 ಕ್ಷೇತ್ರಗಳಲ್ಲಿ ಜನರು ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಸಂಸದರು ಅವರವರ ಕ್ಷೇತ್ರಗಳಲ್ಲಿ ಮೋದಿಯ ಜನ ಸೇವಕರಾಗಿ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಅಂದರೆ ಅಭಿವೃದ್ಧಿ ಶೂನ್ಯ ಎಂಬುದನ್ನು ಮನವರಿಕೆ ಮಾಡಬೇಕಾಗಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕಿದೆ ಎಂದು ಹೇಳಿದರು.