ಬೆಂಗಳೂರು:- ಮುಂದಿನ ನಾಲ್ಕುದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಮಂದಿಗೆ ಪವರ್ ಶಾಕ್.. ಇಂದಿನಿಂದ 2 ದಿನ ಈ ಪ್ರದೇಶದಲ್ಲಿ ಇರಲ್ಲ ಕರೆಂಟ್..!
ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಇಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಮತ್ತು ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.