ನವದೆಹಲಿ:- ಫೈರ್ಬಾಲ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಗುರುಗ್ರಾಮ್ನ ದೌಲತಾಬಾದ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಜರುಗಿದೆ.
ಮೃತರು ಕೌಶಿಕ್, ಅರುಣ್, ಪ್ರಶಾಂತ್ ಮತ್ತು ರಾಮ್ ಅವಧ್ ಎನ್ನಲಾಗಿದೆ. ಈ ಘಟನೆ ನಿನ್ನೆ ಮುಂಜಾನೆ ನಡೆದಿದೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆ ನಡೆದ ಕೂಡಲೇ ಸುಮಾರು 24 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದವು.
ಘಟನೆ ನಡೆದಾಗ ಕಾರ್ಖಾನೆಯೊಳಗೆ 15 ಮಂದಿ ಇದ್ದರು. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲು ಐವರು ಸದಸ್ಯರ ತಂಡವನ್ನು ರಚಿಸಲಾಗಿದೆ