ಬೆಂಗಳೂರು: ರಾಜ್ಯದ ದಲಿತ ಉದ್ಯಮಿಗಳು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ. ಖನಿಜ ಭವನದಲ್ಲಿ ನಡೆದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಧ್ಯಕ್ಷತೆಯ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಸದಸ್ಯರ ಜತೆ ನಡೆದ ಸಭೆಯಲ್ಲಿ ಸಚಿವರು ಎಂ.ಬಿ.ಪಾಟೀಲ್ ಈ ಘೋಷಣೆ ಮಾಡಿದ್ದಾರೆ.
ತೂಕ ಕಡಿಮೆ ಮಾಡಿಕೊಳ್ಳುವಾಗ ಮೀನು ಮತ್ತು ಚಿಕನ್ʼಗಳಲ್ಲಿ ಯಾವುದು ಒಳ್ಳೆಯದು..? ಇಲ್ಲಿದೆ ನೋಡಿ
ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯುವ ಕೆಲಸವನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು. ನಿಯಮಗಳ ಪ್ರಕಾರ ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ದಿಮೆದಾರರಿಗೆ 24.10% ರಷ್ಟು ಕೈಗಾರಿಕಾ ನಿವೇಶನಗಳನ್ನು ಹಂಚಲು ಸರಕಾರ ಬದ್ಧವಾಗಿದೆ.
ಇದರಂತೆ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನೂ 391 ಎಕರೆಯಷ್ಟು ಜಾಗವನ್ನು ಪರಿಶಿಷ್ಟರಿಗೆ ಹಂಚುವುದು ಬಾಕಿ ಇದನ್ನು ಆದಷ್ಟು ಬೇಗ ಹಂಚಿಕೆ ಮಾಡಲಾಗುವುದು ಎಂದಿದ್ದಾರೆ. ಕೋವಿಡ್ ಪೂರ್ವದಲ್ಲಿ ಹಂಚಿಕೆಯಾಗಿರುವ ಫಲಾನುಭವಿಗಳಿಗೆ ಯೋಜನೆ ಜಾರಿ ಮತ್ತು ಹಣ ಪಾವತಿಗೆ ಈ ಹಿಂದೆ ಒಂದು ವರ್ಷ ನೀಡಿದ್ದ ವಿನಾಯಿತಿಯನ್ನು ಸಚಿವರು ಉದ್ದಿಮೆದಾರರ ಮನವಿ ಮೇರೆಗೆ ಎರಡು ವರ್ಷಗಳ ವಿನಾಯಿತಿ ನೀಡಿದರು.