ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಯಾವುವು ಅಂತೀರಾ? ಈ ಸ್ಟೋರಿ ಓದಿ.
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ.. ಹವಾಮಾನ ಇಲಾಖೆ!
ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಸಾಧ್ಯವಾದಷ್ಟು ಬೇಗನೇ ತೂಕ ಇಳಿಸಿಕೊಳ್ಳುವುದು ಉತ್ತಮ. ಅದರಲ್ಲೂ ಪ್ರತಿದಿನ ಒಂದೇ ಒಂದು ಹಸಿ ಬೆಳ್ಳುಳ್ಳಿಯನ್ನು ಈ ರೀತಿ ತಿನ್ನುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವುದಷ್ಟೇ ಅಲ್ಲದೇ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು.
ಹೌದು, ಪ್ರಾಚೀನ ಕಾಲದಿಂದಲೂ ನಾವು ಆಹಾರ ತಿನ್ನುವ ಮುನ್ನ ಎರಡು ಎಸಳು ಬೆಳ್ಳುಳ್ಳಿ ತಿನ್ನಬೇಕು ಎಂದು ಮನೆಯಲ್ಲಿ ದೊಡ್ಡವರು ಹೇಳುವುದನ್ನು ನೀವು ಕೇಳಿರಬಹುದು. ಅಷ್ಟಕ್ಕೂ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಯಾವುವು ಅಂತೀರಾ? ಈ ಸ್ಟೋರಿ ಓದಿ.
ನಮ್ಮ ದೇಹವನ್ನು ಸದೃಢವಾಗಿಡಲು ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸುವುದು ಬಹಳ ಮುಖ್ಯ. ಬೆಳ್ಳುಳ್ಳಿಯು ಆಹಾರಕ್ಕೆ ಪರಿಮಳವನ್ನು ಸೇರಿಸುವ ಒಂದು ಘಟಕಾಂಶವಾಗಿದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇಂತಹ ಬೆಳ್ಳುಳ್ಳಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹಲವಾರು ರೀತಿಯ ಕಾಯಿಲೆಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು. ಅಲ್ಲದೇ ಇಡೀ ಜಗತ್ತನ್ನು ಬೆಚ್ಚಿಬೀಳಿಸುತ್ತಿರುವ ಕ್ಯಾನ್ಸರ್ ಅಪಾಯವನ್ನೂ ತಡೆಗಟ್ಟುವ ಸಾಮಾರ್ಥ್ಯ ಬೆಳ್ಳುಳ್ಳಿಗಿದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ ಮತ್ತು ಕಾರ್ಸಿನೋಜೆನಿಕ್ ಗುಣಲಕ್ಷಣಗಳಿಂದಾಗಿ ನಮ್ಮ ದೇಹಕ್ಕೆ ಯಾವುದೇ ಸೋಂಕು ತಗಲುವುದಿಲ್ಲ. ನೀವು ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಬೆಳ್ಳುಳ್ಳಿ ಎಸಳುಗಳನ್ನು ದಿನದಲ್ಲಿ ಸೇವಿಸಿದರೆ, ಚಯಾಪಚಯವು ಸುಧಾರಿಸುತ್ತದೆ ಮತ್ತು ಹೊಟ್ಟೆಯ ಸುತ್ತಲಿನ ಕೊಬ್ಬು ಕರಗುತ್ತದೆ. ಇದನ್ನು ಸೇವಿಸುವವರಿಗೆ ಜೀರ್ಣಕ್ರಿಯೆ ಉತ್ತಮವಾಗಿ ಕಾರ್ಯನಿರ್ವಹಿಸುವುದರಿಂದ ತಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಖಿನ್ನತೆ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೂ ಬೆಳ್ಳುಳ್ಳಿ ಉತ್ತಮ ಔಷಧವಾಗಿದೆ. ಪ್ರತಿದಿನ ಹಸಿ ಬೆಳ್ಳುಳ್ಳಿಯನ್ನು ತಿನ್ನುವವರು ತಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುತ್ತಾರೆ. ವಿಶೇಷವಾಗಿ ಮಧುಮೇಹ ರೋಗಿಗಳು ಬೆಳ್ಳುಳ್ಳಿಯನ್ನು ಈ ರೀತಿ ತಿನ್ನುವ ಮೂಲಕ ತಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಇದು ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆದರೆ ಅನೇಕರು ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನಲು ಅನೇಕ ಮಂದಿ
ಇಷ್ಟಪಡುವುದಿಲ್ಲ.
ಅಂತಹವರು ಸಿಪ್ಪೆ ಸುಲಿದ ಬೆಳ್ಳುಳ್ಳಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಜೇನುತುಪ್ಪದಲ್ಲಿ ನೆನೆಸಿಡಬೇಕು. ಅಂದರೆ ಎರಡು ದಿನ ಜೇನುತುಪ್ಪದಲ್ಲಿ ನೆನೆಸಿಡಿ. ನಂತರ ಬೆಳ್ಳುಳ್ಳಿ ತಿನ್ನಲು ತುಂಬಾ ರುಚಿಯಾಗಿರುತ್ತದೆ.