ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ನ ನಾಲ್ವರು ಆರೋಪಿಗಳನ್ನು ತುಮಕೂರು ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಆರೋಪಿಗಳ ಸ್ಥಳಾಂತರಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಗಳ ಸ್ಥಳಾಂತರ ಅಗತ್ಯದ ಬಗ್ಗೆ ಕೋರ್ಟ್ಗೆ ಎಸ್ಪಿಪಿ ಪಿ.ಪ್ರಸನ್ನಕುಮಾರ್ ವಿವರಣೆ ನಂತರ ಸ್ಥಳಾಂತರಕ್ಕೆ ಆದೇಶಿಸಲಾಯಿತು.
ರೇಣುಕಾಸ್ವಾಮಿ ನಾವೇ ಕೊಂದಿದ್ದೇವೆಂದು ಹೇಳಿಕೊಂಡು ಮೊದಲು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಶರಣಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೂವರು ಬಾಯ್ಬಿಟ್ಟಿದ್ದರಿಂದ ದರ್ಶನ್ ಮತ್ತು ಗ್ಯಾಂಗ್ ಬಂಧನವಾಗಿತ್ತು.
ನಂತರ ಚಿತ್ರದುರ್ಗ ಡಿವೈಎಸ್ಪಿ ಕಚೇರಿಗೆ ಕಾರು ಚಾಲಕ ರವಿಶಂಕರ್ ಶರಣಾಗಿದ್ದ. ಇಟಿಯೋಸ್ ಕಾರಿನಲ್ಲಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದಿದ್ದ. ಟ್ಯಾಕ್ಸಿ ಸಂಘದವರ ಸಹಾಯ ಕೇಳಿಬಂದಿದ್ದ ಚಾಲಕ ರವಿಶಂಕರ್ನನ್ನು ಡಿವೈಎಸ್ಪಿ ಕಚೇರಿಗೆ ಕರೆತಂದು ಟ್ಯಾಕ್ಸಿ ಸಂಘದ ಮುಖಂಡರು ಶರಣಾಗತಿ ಮಾಡಿಸಿದ್ದರು.