ತುಮಕೂರು:– ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಾಳೆ ತುಮಕೂರು ಜಿಲ್ಲೆ ಬಂದ್ ಗೆ ಹೋರಾಟ ಸಮತಿ ಕರೆ ನೀಡಿದೆ. ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ.
IND V/s AUS: ಕೊಹ್ಲಿ ಡಕೌಟ್… ರೊಚ್ಚಿಗೆದ್ದ ರೋಹಿತ್ ಶರ್ಮಾ ಮಾಡಿದ್ದೇನು ಗೊತ್ತಾ!?..
ನಾಳಿನ ಬಂದ್ ಗೆ ವಿವಿಧ ರೈತ, ಕನ್ನಡಪರ ಸಂಘಟನೆಗಳು, ಮಠಾಧೀಶರು, ವರ್ತಕರು,ವಕೀಲರ ಸಂಘ, ಹೋಟೆಲ್ ಅಸೋಸಿಯೇಷನ್ ಸೇರಿ ಅನೇಕರಿಂದ ಬಂದ್ ಗೆ ಬೆಂಬಲ ನೀಡಲಾಗಿದೆ. ಬೆಳಗ್ಗೆ 10 ಗಂಟೆಗೆ ಟೌನ್ಹಾಲ್ ನಿಂದ ಪ್ರತಿಭಟನಾ ಮೆರವಣಿಗೆ ನಡೆದಿದೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಹೋರಾಟ ಸಮಿತಿ ಮನವಿ ಪತ್ರ ಸಲ್ಲಿಸಲಿದೆ. ತುಮಕೂರು ನಗರ ಸೇರಿದಂತೆ 10 ತಾಲ್ಲೂಕುಗಳಲ್ಲೂ ಬಂದ್ ಗೆ ಸಿದ್ದತೆ ಮಾಡಲಾಗಿದೆ.
ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟಗಾರರು ಪ್ರತಿಭಟನೆ ಮಾಡಲಿದ್ದಾರೆ. ಸ್ವಯಂಪ್ರೇರಿತರಾಗಿ ಬಂದ್ ಗೆ ಬೆಂಬಲ ನೀಡುವಂತೆ ಹೋರಾಟ ಸಮಿತಿಯಿಂದ ಮನವಿ ಮಾಡಲಾಗಿದೆ. ಜಿಲ್ಲಾದ್ಯಂತ ಬಂದ್ ಹಿನ್ನೆಲೆ ಪೊಲೀಸ್ ಇಲಾಖೆಯಿಂದಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೇಮಾವತಿ ನಾಲಾ ವಲಯದ ಗುಬ್ಬಿ, ತುರುವೇಕೆರೆ, ತುಮಕೂರಿನಲ್ಲಿ ಬಂದ್ ಗೆ ತೀವ್ರ ಸ್ವರೂಪ ಪಡೆಯಲಿದೆ. ಮೂರು ತಾಲ್ಲೂಕುಗಳಲ್ಲಿ ಯಾವುದೇ ಅಹಿತರಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಲವಂತವಾಗಿ ಯಾವುದೇ ಅಂಗಡಿ ಮುಚ್ಚಿಸದಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ.