ತುಮಕೂರು:- ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.
ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಶಾಸಕ ಸಿದ್ದು ಸವದಿ ನಡುವೆ ಕೆಡಿಪಿ ಸಭೆಯಲ್ಲಿ ವಾಗ್ವಾದ..!
ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ ಎನ್ನಲಾಗಿದೆ. ರಿಜ್ವಾನ್ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು
ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ, ಸಿಪಿಐ ಹನುನಂತರಾಯಪ್ಪ, ಪಿಎಸ್ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು. ಹೊಸಪೇಟೆಯಿಂದ ಪೊಲೀಸ್ ಜೀಪ್ನಲ್ಲಿ ಮಧುಗಿರಿಗೆ ಕರೆತರುತ್ತಿದ್ದಾಗ, ಬಹಿರ್ದೆಸೆಗೆ ಹೋಗುವುದಾಗಿ ಈಜಿಹಳ್ಳಿ ಕ್ರಾಸ್ ಬಳಿ ಇಳಿದಿದ್ದ. ಈ ವೇಳೆ ಪೊಲೀಸ್ ಪೇದೆ ರಮೇಶ್ ಮೇಲೆ ರಿಹ್ವಾನ್ ಬಿಯರ್ ಬಾಟಲ್ ಎಸೆದು ಹಲ್ಲೆ ನಡೆಸಿ, ಪರಾರಿ ಆಗಲು ಯತ್ನಿಸಿದ್ದ. ಪೊಲೀಸರು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಕರೆ ತಂದಿದ್ದಾರೆ.
ಬಿಯರ್ ಬಾಟೆಲ್ನಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ರಮೇಶ್ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಿಜ್ವಾನ್ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.