ಬೆಂಗಳೂರು: KMF ನಿಂದ ಹಾಲಿನ ದರ ಏರಿಕೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಎಂಎಫ್ನಿಂದ ಹಾಲಿನ ದರ ಏರಿಕೆ ವಿಚಾರವಾಗಿ ಗೃಹ ಕಚೇರಿ ಕೃಷ್ಣದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ಹಾಲಿನ ದರ ಏರಿಕೆ ಬಗ್ಗೆ ನನಗೆ ಗೊತ್ತಿಲ್ಲ. KMF ಅವರ ಜೊತೆ ಮಾತಾಡ್ತೀನಿ.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಹಾಲಿನ ದರ ಹೆಚ್ಚಳ ಮಾಡೋದು ಸರ್ಕಾರ ಅಲ್ಲ ಎಂದು ಸ್ಪಷ್ಟಪಡಿಸಿದರು. ಕೆಎಂಎಫ್ನವರು ಬೇರೆ ರಾಜ್ಯದ ದರ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಬೇರೆ ರಾಜ್ಯದ ದರಕ್ಕೆ ಹೋಲಿಗೆ ಮಾಡಿದರೆ ನಮ್ಮಲ್ಲಿ ಕಡಿಮೆ ಇದೆ. ಆದರೂ ದರ ಏರಿಕೆ ಮಾಡಿರೋ ಬಗ್ಗೆ ನನಗೆ ಗೊತ್ತಿಲ್ಲ. ನಾನು KMF ಅಧ್ಯಕ್ಷರ ಜೊತೆ ಮಾತಾಡ್ತೀನಿ ಎಂದು ಮಾಹಿತಿ ನೀಡಿದರು.