ಹುಬ್ಬಳ್ಳಿ ಜೂ.25: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ಜೂನ್ 29 ರಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ.
ಬೆಳೆ ಪರಿಹಾರ ಗೊಂದಲ ಸರಿಪಡಿಸಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ…!
ಅಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳ ಸಲ್ಲಿಸುವುದು. ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಅಭ್ಯರ್ಥಿಯು ಒಬ್ಬರಕ್ಕಿಂತ ಹೆಚ್ಚಿಗೆ ಇದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.