ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಎರಡನೇ ಬಾರಿ ಮುಖಾಮುಖಿಯಾಗುತ್ತಿದೆ
ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರಕ್ಕೆ ಪೂರ್ವ ತಯಾರಿ ಸಭೆ
ಗಯಾನಾದಲ್ಲಿ ಜೂನ್ 27 ರಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇದಕ್ಕೂ ಮುನ್ನ ಉಭಯ ತಂಡಗಳು ಟಿ20 ಕ್ರಿಕೆಟ್ನಲ್ಲಿ 23 ಬಾರಿ ಮುಖಾಮುಖಿಯಾಗಿವೆ.
ಈ ವೇಳೆ ಭಾರತ ತಂಡವು 12 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ ತಂಡ 11 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇಲ್ಲಿ ಮೇಲ್ನೋಟಕ್ಕೆ ಟೀಮ್ ಇಂಡಿಯಾ ಬಲಿಷ್ಠವಾಗಿದ್ದರೂ, ಅಂಕಿ ಅಂಶಗಳ ಪ್ರಕಾರ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.
ಹಿಸ್ಟರಿ ರಿಪೀಟ್:
2022ರ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿತ್ತು. ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಆಂಗ್ಲರು ಬಗ್ಗು ಬಡಿದಿದ್ದರು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತ್ತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 16 ಓವರ್ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 170 ರನ್ ಬಾರಿಸಿ 10 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿತ್ತು.
ಅಲ್ಲದೆ ಈ ಗೆಲುವಿನ ಮೂಲಕ ಫೈನಲ್ ಪ್ರವೇಶಿಸಿದ್ದ ಇಂಗ್ಲೆಂಡ್ ಅಂತಿಮ ಹಣಾಹಣಿಯಲ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ 2 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.
ಹೀಗಾಗಿ ಕಳೆದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ.