ಬೆಂಗಳೂರು:- , ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ದುಬಾರಿಯಾಗುವ ಸಾಧ್ಯತೆ ಇದೆ. ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ ಆಗ್ರಹಿಸಿದ್ದು, ಬೆಂಗಳೂರು ಜಿಲ್ಲಾಧಿಕಾರಿಯವರನ್ನು ಆಗ್ರಹಿಸಿದೆ.
ನಿಖಿತಾ ಜೊತೆ ಸೇರಬೇಡ ಎಂದಿದ್ದಕ್ಕೆ ದರ್ಶನ್ ನನ್ನಿಂದ ದೂರವಾದ: ನಿರ್ದೇಶಕ ಓಂ ಪ್ರಕಾಶ್ ರಾವ್
ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ.
ಪ್ರತಿ ವರ್ಷ ದರಗಳನ್ನು ಪರಿಷ್ಕರಿಸಿದರೆ, ಆಟೋ ಚಾಲಕರು ಪ್ರಯಾಣಿಕರಿಗೆ ಸೇವೆ ನಿರಾಕರಿಸುವುದನ್ನು ತಪ್ಪಿಸಬಹುದು. ಅಲ್ಲದೆ, ಅಧಿಕ ಶುಲ್ಕ ವಿಧಿಸುವ ದೂರುಗಳನ್ನು ಕಡಿಮೆ ಮಾಡಬಹುದು ಎಂದು ಸಂಘ ಪತ್ರದಲ್ಲಿ ತಿಳಿಸಿದೆ. ಮೂರು ವರ್ಷಗಳಿಂದ ಪ್ರಯಾಣ ದರ ಏರಿಕೆಯಾಗದ ಕಾರಣ ಕನಿಷ್ಠ ಆಟೋ ದರವನ್ನು ಕೂಡ ಹೆಚ್ಚಿಸುವಂತೆ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಇಂಧನ ಮತ್ತು ಬಿಡಿಭಾಗಗಳ ಬೆಲೆಗಳು ಮತ್ತು ಹಣದುಬ್ಬರದಿಂದ ಸಮಸ್ಯೆ ಎದುರಾಗಿದೆ ಎಂದು ಪತ್ರ ಬರೆಯಲಾಗಿದೆ. ಬೆಂಗಳೂರು ನಗರದಲ್ಲಿ ಆಟೋದರ ಪರಿಷ್ಕರಣೆಯನ್ನು 2021ರ ಡಿಸೆಂಬರ್ 20ರಂದು ಮಾಡಲಾಗಿದೆ. ನಂತರ ಪರಿಷ್ಕರಣೆ ಮಾಡಿಲ್ಲ. ನಗರದಲ್ಲಿ ಆರಂಭದ 2 ಕಿ.ಮೀ.ಗೆ 30 ರೂ. ನಂತರ ಪ್ರತಿ ಹೆಚ್ಚುವರಿ ಕಿ.ಮೀ. 15 ರೂ ದರ ನಿಗದಿಯಾಗಿದೆ. ಈ ದರ 3 ವರ್ಷಗಳ ಹಿಂದೆ ಪರಿಷ್ಕರಿಸಲಾಗಿತ್ತು. ಈಗ ಮತ್ತೆ 5 ರಿಂದ 10 ರುಪಾಯಿ ಪರಿಷ್ಕರಿಸಲು ಮನವಿ ಮಾಡಲಾಗಿದೆ. ಸದ್ಯ ಬೆಂಗಳೂರು ನಗರದಲ್ಲಿ ಕನಿಷ್ಠ 30 ರುಪಾಯಿ ಇದ್ದು, ಅದನ್ನು 40 ರುಪಾಯಿ ಮಾಡಬೇಕೆಂದು ಮನವಿ ಮಾಡಲಾಗಿದೆ.