ಬೆಂಗಳೂರು:– ಮುಂದಿನ 4 ದಿನ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗರೇ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್.. ಈ ಏರಿಯಾ ಇದೇನಾ ಚೆಕ್ ಮಾಡಿ!
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.