ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಸವನಗೌಡ ಬಾದರ್ಲಿ ಅವರು ವಿಧಾನ ಸೌಧದ ಮೊದಲೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 121ರಲ್ಲಿ ಚುನಾವಣಾಧಿಕಾರಿ ಹಾಗೂ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.