ಬೆಂಗಳೂರು: ಬಾಂಬೆ ಮಿಠಾಯಿ, ಗೋಬಿ ಹಾಗೂ ಕಬಾಬ್ನಲ್ಲಿ ಸಿಕ್ಕಿರುವಂತೆ, ಪಾನಿಪೂರಿಯಲ್ಲೂ ಕೂಡ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಪಾನಿಪೂರಿಗೆ ಬಳಸೋ ಐದು ಮಾದರಿಯ ಸಾಸ್ಗಳು ಹಾಗೂ ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಬೆಂಗಳೂರಿನ 49 ಪ್ರದೇಶಗಳಿಂದ ಈ ಕುರಿತಂತೆ ಮಾಹಿತಿ ಸಂಗ್ರಹಿಸಲಾಗಿದೆ.
ನಗರದ ನಾನಾ ಭಾಗಗಳಲ್ಲಿ ಸೇರಿ ಒಟ್ಟು 243 ಸ್ಯಾಂಪಲ್ ಗಳನ್ನು ಪಡೆಯಲಾಗಿದೆ. ಅದರಲ್ಲಿ 43 ಸ್ಯಾಂಪಲ್ ಗಳಿಂದ ಇದು ದೇಹಕ್ಕೆ ಸುರಕ್ಷಿತವಲ್ಕ ಎಂಬ ವರದಿ ಬಂದಿದೆ. ಪಾನಿಪೂರಿ ಸೇವನೆಯಿಂದ ಹೊಟ್ಟೆ ಉಬ್ಬರ, ಮೋಷನ್ ಆಗದೆ ಇರುವುದು ಜೊತೆಗೆ ಹೊಟ್ಟೆಯ ಕ್ಯಾನ್ಸರ್ ಕೂಡ ಬರಬಹುದು. ಅದರಲ್ಲೂ ಪ್ರತಿದಿನ ಪಾನಿಪೂರಿ ತಿನ್ನುವವರಿಗೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ ಎಂದು ಆಹಾರ ಇಲಾಖೆಯ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ.
49 ಕಡೆ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಯಾನ್ಸರ್ ಕಾರಕ ಇರೋ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನು ಸಂಗ್ರಹ ಮಾಡಿಕೊಂಡು ಟೆಸ್ಟ್ ಮಾಡಲಾಗಿದೆ.
ಬೆಂಗಳೂರಿನ 19 ಕಡೆಗಳಲ್ಲಿ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿಯನ್ನು ಪಾನಿಪೂರಿಯಲ್ಲಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ವಾರದಲ್ಲಿ ಪಾನಿಪುರಿಗೆ ಹಾಕೋ ಸಾಸ್ ಮತ್ತು ಮಿಟಾ ಬ್ಯಾನ್ ಮಾಡೋಕೆ ನಿರ್ಧಾರ ಮಾಡಲಾಗುತ್ತದೆ.