ಕೊಲಂಬೊ:- ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಪೊಲೀಸರು ಕಾರ್ಯಚರಣೆ ನಡೆಸಿ 60 ಭಾರತೀಯರನ್ನು ಬಂಧಿಸಲಾಗಿದೆ.
ಕಾರವಾರದಲ್ಲಿ ಮಳೆ ಅವಾಂತರ.. ಅಂಗಡಿಯ ಮಣ್ಣಿನ ಗೋಡೆ ಕುಸಿದು ವೃದ್ಧೆ ದುರ್ಮರಣ!
ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಸೂಚಿಸಿ ಒತ್ತಡ ಹಾಕಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.