ಭಾರತ- ಆಫ್ರಿಕಾ ಫೈನಲ್ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ಇದು ಬಾರ್ಬಡೋಸ್ನಲ್ಲಿ ಟೀಮ್ ಇಂಡಿಯಾದ ನಾಲ್ಕನೇ ಟಿ20 ಪಂದ್ಯವಾಗಿದೆ. ಇದಕ್ಕೂ ಮುನ್ನ ಇಲ್ಲಿ 3 ಪಂದ್ಯಗಳನ್ನು ಆಡಿದ್ದು, 1ರಲ್ಲಿ ಮಾತ್ರ ಗೆದ್ದಿದೆ. ಜೊತೆಗೆ ಬಾರ್ಬಡೋಸ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾದ ಮೊದಲ ಹಣಾಹಣಿಯಾಗಿದೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯಕ್ಕೆ ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ವೆಸ್ಟ್ ಇಂಡೀಸ್ನ ಬಾರ್ಬಡೋಸ್ ಮೈದಾನ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಈ ಪಂದ್ಯದ ಅತ್ಯುತ್ತಮ ವಿಷಯವೆಂದರೆ ಈ ಎರಡು ತಂಡಗಳು ಪಂದ್ಯಾವಳಿಯ ಸೆಮಿಫೈನಲ್ ಹಂತದವರೆಗೆ ಯಾವುದೇ ಪಂದ್ಯವನ್ನು ಸೋತಿಲ್ಲ. ಸೆಮಿಫೈನಲ್ನಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ ಫೈನಲ್ಗೆ ಟಿಕೆಟ್ ಪಡೆದಿದ್ದರೆ, ಟೂರ್ನಿಯ ಎರಡನೇ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಫೈನಲ್ಗೆ ತಲುಪಿದೆ