ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಟಿ20 ವಿಶ್ವಕಪ್ ಗೆದ್ದು ಬೀಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಪತ್ರಕ್ಕೆ ಅಮಿತ್ ಶಾ ಸ್ಪಂದನೆ.. ಪತ್ರದಲ್ಲೇನಿತ್ತು ಗೊತ್ತಾ!?
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 7 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿತು
11 ವರ್ಷಗಳ ಬಳಿಕ ಟೀಮ್ ಇಂಡಿಯಾ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು. ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ 20 ಓವರ್ಗಳಿಗೆ 7 ವಿಕೆಟ್ ನಷ್ಟಕ್ಕೆ 176 ರನ್ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡ 20 ಓವರ್ಗಳಿಗೆ 8 ವಿಕೆಟ್ ನಷ್ಟಕ್ಕೆ 169 ರನ್ಗಳಿಗೆ ಸೀಮಿತವಾಯಿತು.
ಹೆನ್ರಿಚ್ ಕ್ಲಾಸೆನ್ ಅವರ ಸ್ಪೋಟಕ ಅರ್ಧಶತಕದ ಹೊರತಾಗಿಯೂ ಭಾರತ ತಂಡದ ಡೆತ್ ಓವರ್ಗಳ ಪರಿಣಾಮಕಾರಿ ಬೌಲಿಂಗ್ಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ ಕೇವಲ 9 ರನ್ಗಳಿಂದ ಸೋಲು ಒಪ್ಪಿಕೊಂಡಿತು
2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ ತಂಡ, ಬರೋಬ್ಬರಿ 17 ವರ್ಷಗಳ ಬಳಿಕ ಎರಡನೇ ಚುಟುಕು ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಫನಲ್ ಪಂದ್ಯದಲ್ಲಿ ಭಾರತ ತಂಡ 9 ರನ್ಗಳಿಂದ ರೋಚಕ ಗೆಲುವು ಪಡೆಯಿತು. ಆ ಮೂಲಕ 2024ರ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿತು.