ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಟಿ20 ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ.
World Cup 2024: ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ..17 ವರ್ಷಗಳ ಬಳಿಕ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ..!
ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ನಲ್ಲಿ ವಿಕೆಟ್ ಉರುಳುತ್ತಿದ್ದಾಗ ಗಟ್ಟಿ ಬಂಡೆಯಂತೆ ನಿಂತು 76 ರನ್ (59 ಎಸೆತ, 6 ಬೌಂಡರಿ, 2 ಸಿಕ್ಸರ್) ಸಿಡಿಸಿದ ವಿರಟ್ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಟಿ 20 ವಿಶ್ವಕಪ್. ಇಲ್ಲಿಯವರೆಗೆ ಇದನ್ನೇ ಸಾಧಿಸಲು ನಾವು ಬಯಸುತ್ತಿದ್ದೆವು ಎಂದು ಹೇಳಿದರು. ಇದು ಭಾರತಕ್ಕಾಗಿ ಆಡುತ್ತಿರುವ ನನ್ನ ಕೊನೆಯ ಟಿ20 ಪಂದ್ಯ. ಮುಂದೆ ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು ಎಂದು ತಿಳಿಸಿ ಈ ಯಶಸ್ಸಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದರು
ಈ ಮೂಲಕ ಕೊಹ್ಲಿ ಅಭಿಮಾನಿಗಳಿಗೆ ಕೊಂಚ ನಿರಾಸೆ ಆಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)