T20 ವಿಶ್ವಕಪ್ ಗೆದ್ದಿರುವ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ PM, ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ. ಜೊತೆಗೆ ಭಾರತ ಕ್ರಿಕೆಟ್ ತಂಡವನ್ನ ಸಂದೇಶದಲ್ಲಿ ಹೇಳಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Virat Kohli: ಕೊಹ್ಲಿ ಫ್ಯಾನ್ಸ್ ಗೆ ಬಿಗ್ ಶಾಕ್.. ಟಿ20 ಕ್ರಿಕೆಟ್ಗೆ ಗುಡ್ಬೈ ಹೇಳಿದ ವಿರಾಟ್..!
ಈ ಅದ್ಭುತ ಗೆಲುವಿಗಾಗಿ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಇಂದು, 140 ಕೋಟಿ ಭಾರತೀಯರು ನಿಮ್ಮ ಅದ್ಭುತ ಪ್ರದರ್ಶನದ ಬಗ್ಗೆ ಹೆಮ್ಮೆಪಡುತ್ತಾರೆ. ನೀವು ವಿಶ್ವಕಪ್ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಾ ಎಂದು ನಿಮ್ಮನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಇನ್ನೂ ಶನಿವಾರ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಭಾರತ ತಂಡ 2024ರ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಆಯಿತು. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಎರಡನೇ ಟಿ20 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿತು ಹಾಗೂ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಗೆ ಮುತ್ತಿಟ್ಟಿತು.
![](https://ainlivenews.com/wp-content/uploads/2024/01/Ad-Banner-copy-scaled.jpg)