ವಿಜಯನಗರ:- ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಜರುಗಿದೆ.
World Cup: T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಶುಭ ಕೋರಿದ ರಾಹುಲ್ ಗಾಂಧಿ..!
27 ವರ್ಷದ ಚಾಲಕ ವಿನಯ್, 28 ವರ್ಷದ ಚನ್ನಬಸವ ಮೃತ ದುರ್ದೈವಿಗಳು ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇಳಕಲ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎರಿಟಿಗಾ ಕಾರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ಓರ್ವರ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)