ಬೆಂಗಳೂರು:- ದೇಶದಾದ್ಯಂತ ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ ಆಗಲಿದೆ.
ಜುಲೈ 1ರಿಂದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಯು ಜಾರಿಗೆ ಬರಲಿವೆ ಎನ್ನಲಾಗಿದೆ. ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳ ಬಗ್ಗೆ ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಬ್ರಿಟಿಷರ ಕಾಲದ IPC-ಭಾರತೀಯ ನ್ಯಾಯ ಸಂಹಿತಾ, CrPC-ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆ್ಯಕ್ಟ್-ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತವೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತನ ಉದ್ದೇಶಗಳಿವೆ.
ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.
ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷವೇ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯನ್ನೂ ಸಹ ಪಡೆಯಲಾಗಿತ್ತು. ಆದರೆ, ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.
![](https://ainlivenews.com/wp-content/uploads/2024/01/Ad-Banner-copy-scaled.jpg)