ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದಾಗಿದೆ. ಆದ್ರೆ ಯೋಜನೆಯ ಹಣ ಖಾತೆಗಳಿಗೆ ಬರುತ್ತಿಲ್ಲ ಎಂದು ಮಹಿಳೆಯರು ಅಲವತ್ತುಕೊಳ್ಳುತ್ತಿದ್ದರು.
ಆದರೆ, ಇದೀಗ ಆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Consuming Milk After Eating Fish: ಮೀನು ತಿಂದ್ಮೇಲೆ ತಪ್ಪಿಯೂ ಹಾಲು ಕುಡಿಯಬೇಡಿ..! ಯಾಕೆ ಗೊತ್ತಾ..?
ಮೇ ತಿಂಗಳಲ್ಲಿ ಎಲ್ಲರ ಅಕೌಂಟ್ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ಅವರು ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)