ಬೆಂಗಳೂರು:- ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರ್ಕಾರದಲ್ಲಿ ಬರೀ ಕುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಕುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್..ಟೀಂ ಇಂಡಿಯಾದ ಮತ್ತೊಬ್ಬ ಆಲ್ರೌಂಡರ್ ನಿವೃತ್ತಿ ಘೋಷಣೆ!
ಇದೇ ವೇಳೆ ರಾಜ್ಯ ಸರ್ಕಾರ ಬೀಳುತ್ತದೆ ಎಂದು ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ-ಮಂತ್ರಿಗಳ ನಡುವೆ ಏನಾಗುತ್ತದೆ..? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ ಎಂದು ತಿಳಿದುಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು, ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೋ ನನಗೆ ಗೊತ್ತಿಲ್ಲ. ಸಲೀಂ ಅಹ್ಮದ್ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಬೊಮ್ಮಾಯಿ ಹೇಳಿದರು.
ಶಾಸಕರಿಗೆ ನೀಡುವ ಭತ್ಯೆ ಚಹಾ ಕುಡಿಯಲಿಕ್ಕೆ ಸಾಲಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)