ಗದಗ:– ಭಾರತ ತಂಡವು ಟಿ20 ವಿಶ್ವಕಪ್ ಗೆದ್ದ ಹಿನ್ನೆಲೆ ಗದಗ ನಗರದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಗದಗ ನಗರದ ದಾಸರ ಓಣಿಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಇಂಡಿಯಾ ಇಂಡಿಯಾ ಅಂತಾ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.
ಗದಗ: ನೂತನ ಸಂಸದ ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಮಹಿಳೆಯರಿಂದ ಅದ್ದೂರಿ ಸ್ವಾಗತ!
ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮ ಮಾಡಿದ್ದಾರೆ.
ಇನ್ನೂ ಶನಿವಾರ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಭಾರತ ತಂಡ 2024ರ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಆಯಿತು. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಎರಡನೇ ಟಿ20 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿತು ಹಾಗೂ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಗೆ ಮುತ್ತಿಟ್ಟಿತು.