ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್ನ್ಯೂಸ್ ಸಿಕ್ಕಿದ್ದು, ಇಂದಿನಿಂದ LPG ಸಿಲಿಂಡರ್ ಬೆಲೆ ಇಳಿಕೆ ಆಗಲಿದೆ. ಈ ಪ್ರಯೋಜನವು ಕೆಲವರಿಗೆ ಮಾತ್ರ ಅನ್ವಯಿಸುತ್ತದೆ ಎನ್ನಲಾಗಿದೆ.
ಕಿಡ್ನಿ ಆರೋಗ್ಯವಾಗಿರಬೇಕೆ!?.. ಹಾಗಿದ್ರೆ ನಿತ್ಯ ಈ ಆಹಾರ ಸೇವನೆ ಸೂಕ್ತ..!
ಇಂದು ಸಿಲಿಂಡರ್ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಹಲವರು ಭವಿಷ್ಯ ನುಡಿದಿದ್ದರು. ಆದರೆ ಅದು ಆಗಲಿಲ್ಲ. ಸಿಲಿಂಡರ್ ಬೆಲೆಯಲ್ಲಿನ ಕಡಿತವು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದೆ. ಇದರ ಲಾಭ ಕೆಲವರಿಗೆ ಮಾತ್ರ ಎಂದು ಹೇಳಬಹುದು. ಹಾಗಾದರೆ ಇಂದು ಸಿಲಿಂಡರ್ ಬೆಲೆ ಹೇಗಿದೆ ಎಂದು ನೋಡೋಣ.
ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.
ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ. ಜೂನ್ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂಪಾಯಿ ಇತ್ತು. ಇದೀಗ 31 ರೂಪಾಯಿ ಇಳಿಕೆಯಾಗಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ ನೋಡೋದಾದ್ರೆ, 14.5 ಕೆಜಿಯ ಡೊಮೆಸ್ಟಿಕ್ ಸಿಲಿಂಡರ್ ಬೆಲೆ 905.5 ರೂಪಾಯಿ ಇದೆ. ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ ಎಂದು ಹೇಳಲಾಗಿದೆ.