ವಿಶ್ವಕಪ್ ಗೆಲುವಿನ ಖುಷಿಯಲ್ಲಿದ್ದ ಶಾಕಿಂಗ್ ಸುದ್ದಿ ಕೊಟ್ಟ ವಿರಾಟ್ ಮತ್ತು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಸುದ್ದಿ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ಉಂಟು ಮಾಡಿದೆ
ನಿಮ್ಮ ಬಿಳಿ ಕೂದಲು ಕಪ್ಪಾಗಲು ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ… ವಾರದಲ್ಲೇ ಬರುತ್ತೆ ರಿಸಲ್ಟ್!
ವಿಶ್ವಕಪ್ ಗೆದ್ದ ಬಳಿಕ ಇಬ್ಬರೂ ವಿದಾಯ ಹೇಳಿದ್ದು ಸರಿಯಾಗಿದೆ ಎನ್ನುವ ವಾದ ಕೂಡ ಕೇಳಿಬಂದಿದೆ.
ಯುವ ಆಟಗಾರರಿಗೆ ಅವಕಾಶ ಸಿಗಬೇಕು ಎಂದು ಟಿ20 ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದರು. ಆದರೆ ಇದೇ ನಿಜವಾದ ಕಾರಣವಾ? ಅಥವಾ ಇಬ್ಬರೂ ದಿಢೀರ್ ನಿವೃತ್ತಿ ಘೋಷಿಸಿದ್ದರ ಹಿಂದೆ ಬೇರೆ ಏನಾದರೂ ಕಾರಣ ಇದೆಯಾ ಎನ್ನುವ ಚರ್ಚೆ ಶುರುವಾಗಿದೆ.
ಹಲವು ಅಭಿಮಾನಿಗಳು ರೋಹಿತ್ ಮತ್ತು ವಿರಾಟ್ ನಿವೃತ್ತಿಯಾಗಲು ಗಂಭೀರ್ ಕಾರಣ ಎನ್ನುತ್ತಿದ್ದಾರೆ. ಗಂಭೀರ್ ಭಾರತ ತಂಡದ ಮುಂದಿನ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ. ಗಂಭೀರ್ ಬಂದ ನಂತರ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡುವ ಸಾಧ್ಯತೆ ಇದೆ. ಯುವ ಆಟಗಾರರಿಗೆ ಅವಕಾಶ ಸಿಗಲಿ ಎಂದು ಕೊಹ್ಲಿ ಮತ್ತು ರೋಹಿತ್ರನ್ನು ತಂಡದಿಂದ ಕೈಬಿಟ್ಟರೂ ಅಚ್ಚರಿ ಇಲ್ಲ ಎನ್ನಲಾಗಿತ್ತು. ಇದೇ ಕಾರಣಕ್ಕೆ ಇಬ್ಬರು ದಿಗ್ಗಜರೂ, ಗೆಲುವಿನ ಖುಷಿಯಲ್ಲಿದ್ದಾಗಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ವಾದಿಸಲಾಗುತ್ತಿದೆ.
ಭಾರತ ಟಿ20 ವಿಶ್ವಕಪ್ ಗೆದ್ದ ಬಳಿಕ ಗಂಭೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಶ್ವಕಪ್ ಗೆಲುವಿನ ಬಳಿಕ ನಿವೃತ್ತಿ ಪಡೆದಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದು ಉತ್ತಮ ನಿರ್ಧಾರ ಎಂದು ಹೇಳಿದ್ದಾರೆ.