ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ (Batting Coach) ಮತ್ತು ಮೆಂಟರ್ (Mentor) ಆಗಿ ದಿನೇಶ್ ಕಾರ್ತಿಕ್ (Dinesh Karthik) ಆಯ್ಕೆಯಾಗಿದ್ದಾರೆ.
ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಹೇಳಿದ ನಂತರ ದಿನೇಶ್ ಕಾರ್ತಿಕ್ ಹೊಸ ಜವಾಬ್ದಾರಿಯೊಂದಿಗೆ ಆರ್ಸಿಬಿಗೆ ರಿಎಂಟ್ರಿಯಾಗಿದ್ದಾರೆ.
ದಿನೇಶ್ ಕಾರ್ತಿಕ್ ಹೊಸ ಅವತಾರದಲ್ಲಿ ಆರ್ಸಿಬಿ ಮರಳಿದ್ದಾರೆ. ಡಿಕೆ ಆರ್ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್ಸಿಬಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ.
T20 World Cup 2024: ಟಿ20 ವಿಶ್ವಕಪ್ ಗೆದ್ದ ಭಾರತೀಯರಿಗೆ BCCIನಿಂದ ಬಂಪರ್ ಘೋಷಣೆ
ಅಹದಾಬಾದ್ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದ ಬೆನ್ನಲ್ಲೇ ಆರ್ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್ನಿಂದ ನಿವೃತ್ತಿ ಘೋಷಿಸಿದ್ದರು.
17 ವರ್ಷಗಳ ಐಪಿಎಲ್ ಕೆರಿಯರ್ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದರಲ್ಲೂ ಆರ್ಸಿಬಿ ಪರ ಟ್ರೋಫಿ ಗೆಲ್ಲುವ ಆಸೆ ಹೊಂದಿದ್ದ ಡಿಕೆ ಅವರ ಕನಸು ಕನಸಾಗಿಯೇ ಉಳಿದಿದೆ.