ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ, ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ.
ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಲಿಲ್ವಾ ಎಂದು ಪ್ರಶ್ನಿಸಿದರು.
Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ
ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ದೀರಿ. ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾಧ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದರೆ ಎಷ್ಟು ವರ್ಷ ಎಂದು ಗೊತ್ತಿಲ್ಲ ಎಂದರು.