ವಿಜಯಪುರ:- ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಮಗ್ರ ಕಾಯ್ದೆ ರೂಪಿಸುವಂತೆ ಆಗ್ರಹಿಸಿ ಕರವೇ ನಾರಾಯಣ ಗೌಡ ಬಣದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಧರಣಿ ಸತ್ಯಾಗ್ರಹ ಜರುಗಿದೆ.
Breaking: ಕುಲಹಳ್ಳಿ-ಹುನ್ನೂರ ಏತ ನೀರಾವರಿ ಯೋಜನೆಗೆ ಸಚಿವ ತಿಮ್ಮಾಪೂರ ಚಾಲನೆ..!
ವಿಜಯಪುರ ನಗರದ ಸಿದ್ದೇಶ್ವರ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ. ಇದೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಮಗ್ರ ಕಾಯ್ದೆ ರೂಪಿಸುವಂತೆ ಆಗ್ರಹಿಸಿದ್ದಾರೆ. ಕರವೇ ಕಾರ್ಯಕರ್ತರು, ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ, ಕರವೇ ಮುಖಂಡರಾದ ಫಯಾಜ್ ಕಲಾದಗಿ ಸೇರಿದಂತೆ ಹಲವರು ಭಾಗಿಯಾಗಿದ್ದರು.