ಬೆಂಗಳೂರು: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು (New Criminal Laws) ಜಾರಿಯಾಗಿದೆ. ಭಾರತೀಯ ದಂಡ ಸಂಹಿತೆಯು (IPC) ಭಾರತೀಯ ನ್ಯಾಯ ಸಂಹಿತೆಯಾಗಿ (BSN), ಅಪರಾಧ ಪ್ರಕ್ರಿಯಾ ಸಂಹಿತೆಯು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಾಗಿ ಮತ್ತು ಸಾಕ್ಷ್ಯ ಕಾಯ್ದೆಯು ಭಾರತೀಯ ಸಾಕ್ಷ್ಯ ಕಾಯ್ದೆಯಾಗಿ ಜಾರಿಗೆ ಬಂದಿದೆ. ಹೊಸ ಕಾನೂನು ಜಾರಿಯಾದ ಮೊದಲ ದಿನವೇ ರಾಜ್ಯಾದ್ಯಂತ 63 ಎಫ್ಐಆರ್ ದಾಖಲಾಗಿವೆ ಎಂದು ಪೊಲೀಸ್ ಇಲಾಖೆ (Police department) ಮಾಹಿತಿ ನೀಡಿದೆ.
Constable Sucide: ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್ ಮೃತದೇಹ ಸಿಕ್ಕಿದ್ದೇ ರೋಚಕ !
ಹೊಸ ಕ್ರಿಮಿನಲ್ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯನ್ನು ವಸಾಹತು ಕಾಲದ ಜಡತ್ವದಿಂದ ಹೊರತರುತ್ತದೆ ಎಂಬುದು ಕೇಂದ್ರ ಸರ್ಕಾರದ ಪ್ರತಿಪಾದನೆ. ಹೊಸ ಕಾನೂನು ಪ್ರಯೋಗಕ್ಕೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಇನ್ಪೆಕ್ಟರ್ಗಳಿಗೆ ತರಬೇತಿ ನೀಡಲಾಗಿದೆ. ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು, ಪಬ್ಲಿಕ್ ಪ್ರಾಸಿಕ್ಯೂಟರ್ಗಳು ಹಾಗೂ ಹಿರಿಯ ವಕೀಲರಿಂದ ತರಬೇತಿ ಕೊಡಿಸಲಾಗಿದೆ. ಸಿವಿಲ್ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆದ್ಯತೆ ಮೇರೆಗೆ ತರಬೇತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ