ರಾಮನಗರ: ಚನ್ನಪಟ್ಟಣಕ್ಕೆ ಈಗ ಶಾಸಕರು ಇಲ್ಲ. ಹೀಗಾಗಿ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ.
Morning Health Tips: ಖಾಲಿ ಹೊಟ್ಟೆಯಲ್ಲಿ ಈ ಕಹಿ ಪದಾರ್ಥ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?
ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ, ನೀತಿ ನೋಡಿ ಕೆಲಸ ಮಾಡಿದ್ದೇನೆ. ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.