ಮಂಗಳೂರು: ಸಚಿವ ಈಶ್ವರ್ ಖಂಡ್ರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಶೀಘ್ರ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
Kalaburgi: ಮೌತ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ವೈರ್ಲೆಸ್ ಇನ್ಸ್ಪೆಕ್ಟರ್ ಶವ ರೈಲ್ವೆ ಹಳಿ ಮೇಲೆ ಪತ್ತೆ…!
ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು.
ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಇದಲ್ಲದೆ ಎತ್ತಿನಭುಜ ಸೇರಿದಂತೆ ಕೆಲವು ಕಡೆಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಿದರು.