ಬೆಂಗಳೂರು:- ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಶೀಘ್ರ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ -ಸಚಿವ ಈಶ್ವರ್ ಬಿ. ಖಂಡ್ರೆ..!
ಷರತ್ತುಗಳೇನು?
- ದಿನನಿತ್ಯದ ಸ್ವಚ್ಛತಾ ಕೆಲಸ, ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85 ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡುವುದು.
- ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಆ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ರಜೆ ನೀಡಲು ಅವಕಾಶ ಕಲ್ಪಿಸಬಹುದು.
- ವಾರದ ರಜೆಯನ್ನು ನೌಕರರು, ಪೌರ ಕಾರ್ಮಿಕರ ಹಕ್ಕು ಎಂದು ಪರಿಗಣಿಸತಕ್ಕದ್ದಲ್ಲ ಹಾಗೂ ಒಂದು ವಾರದ ಒಂದು ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯಲು ಅವಕಾಶವಿರುವುದಿಲ್ಲ.
- ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ ಸಮಾರಂಭಗಳ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ ಹಾಗೂ ಈ ಸಂದರ್ಭದಲ್ಲಿ ವಾರದ ರಜೆ ನೀಡುವ ಅಧಿಕಾರ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ವಿವೇಚನೆಗೆ ಒಳಪಟ್ಟಿರುತ್ತದೆ
ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಇದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಮನವಿ ಮಾಡಿದ್ದರು. ಇದೀಗ ನಗರಾಭಿವೃದ್ಧಿ ಇಲಾಖೆ ಪೌರ ಕಾರ್ಮಿಕರ ಮನವಿಗೆ ಸ್ಪಂದಿಸಿದ್ದು, ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಿದೆ.