ಬೆಂಗಳೂರು:- ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
Breaking: ಚನ್ನಪಟ್ಟಣ ನಡೆಯೇ ನಿಗೂಢ..ಬೈ ಎಲೆಕ್ಷನ್ ಅಖಾಡದಲ್ಲಿ ಡಿಕೆಶಿ ಸ್ಪರ್ಧೆ ಇಲ್ಲ!
ಮಲೆನಾಡು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಸುರಿಯುತ್ತಿರುವ ನೈರುತ್ಯ ಮುಂಗಾರಿನಿಂದ ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಳೆಯಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಆದರಿಂದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ