ಬೆಂಗಳೂರು: ಕರ್ನಾಟಕದೆಲ್ಲೆಡೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಇದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಮನವಿ ಮಾಡಿದ್ದರು. ಇದೀಗ ನಗರಾಭಿವೃದ್ಧಿ ಇಲಾಖೆ ಪೌರ ಕಾರ್ಮಿಕರ ಮನವಿಗೆ ಸ್ಪಂದಿಸಿದೆ.
BREAKING: ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್: ಸಂಕಷ್ಟದಲ್ಲಿ ಪೋಷಕರು!
ಷರತ್ತುಗಳೇನು?
- ದಿನನಿತ್ಯದ ಸ್ವಚ್ಛತಾ ಕೆಲಸ, ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85 ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡುವುದು.
- ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಆ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ರಜೆ ನೀಡಲು ಅವಕಾಶ ಕಲ್ಪಿಸಬಹುದು.
- ವಾರದ ರಜೆಯನ್ನು ನೌಕರರು, ಪೌರ ಕಾರ್ಮಿಕರ ಹಕ್ಕು ಎಂದು ಪರಿಗಣಿಸತಕ್ಕದ್ದಲ್ಲ ಹಾಗೂ ಒಂದು ವಾರದ ಒಂದು ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯಲು ಅವಕಾಶವಿರುವುದಿಲ್ಲ.
- ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ ಸಮಾರಂಭಗಳ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ ಹಾಗೂ ಈ ಸಂದರ್ಭದಲ್ಲಿ ವಾರದ ರಜೆ ನೀಡುವ ಅಧಿಕಾರ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ವಿವೇಚನೆಗೆ ಒಳಪಟ್ಟಿರುತ್ತದೆ